ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮೀತಿಮೀರಿದ್ದು, ಸ್ಥಳೀಯರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತಮ್ಮಡಿಕೊಪ್ಪ, ಬಟಾಣಿ ಜಡ್ಡು ಪ್ರದೇಶಗಳಲ್ಲಿ ಪ್ರತ್ಯಕ್ಷವಾಗಿರುವ ಆನೆಗಳು ಮೂರ್ತಿ ಆಚಾರ್ ಮತ್ತು ಮಂಜಪ್ಪ ಎಂಬುವವರ ತೋಟಗಳಿಗೆ ನುಗ್ಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಬಾಳೆ ಬೆಳೆಗಳನ್ನು ಧ್ವಂಸಗೊಳಿಸಿವೆ.
ವಿಷಯ ತಿಳಿಯುತ್ತಿದ್ದಂತೆ ಸಿರಿಗೆರೆ ವಲಯ ಅರಣ್ಯಾಧಿಕಾರಿ ಸವಿನಯ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆಯಾಗಿ ಆಲುವಳ್ಳಿ, ಗಾಳಿಬೈಲು ಹಾಗೂ ಕೆಂಚನಾಲ ಭಾಗದ ಜನರು ರಾತ್ರಿ ಮತ್ತು ಮುಂಜಾನೆ ವೇಳೆ ಅರಣ್ಯ ಅಂಚಿನ ಜಮೀನುಗಳಿಗೆ ತೆರಳದಂತೆ ಸೂಚಿಸಲಾಗಿದೆ. ಆನೆಗಳನ್ನು ಹಿಂಬಾಲಿಸದೆ ತಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದ್ದು, ಬೆಳೆ ಕಳೆದುಕೊಂಡ ರೈತರು ಶಾಶ್ವತ ಪರಿಹಾರ ಹಾಗೂ ಸೂಕ್ತ ರಕ್ಷಣೆಗೆ ಆಗ್ರಹಿಸಿದ್ದಾರೆ.
PublicNext
16/09/2026 11:26 am
LOADING...