ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಆ್ಯಕ್ಟೀವ್ ಆದ ಹುಲಿ... ಓಡಾಟದ ಹೆಜ್ಜೆ ಗುರುತು ಪತ್ತೆ, ಟೈಗರ್ ಸೆರೆಗೆ ಸ್ಥಳೀಯರ ಒತ್ತಾಯ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಮತ್ತೊಮ್ಮೆ ಹುಲಿ ಚಟುವಟಿಕೆ ಚುರುಕುಗೊಂಡಿದೆ. ಏಳು ಬೆಟ್ಟಗಳ ವ್ಯಾಪ್ತಿಯ ತಗ್ಗು ಪ್ರದೇಶದಲ್ಲಿ ಹುಲಿ ಎರಡು ಜಾನುವಾರುಗಳನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಹುಲಿಯ ಗುರುತು ಪತ್ತೆಯಾಗಿದ್ದು, ದನಗಾಹಿಗಳಲ್ಲಿ ಭಯ ಮೂಡಿಸಿದೆ.

ಹಲವು ದಿನಗಳಿಂದ ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸಾಮಾನ್ಯವಾಗಿ ಹುಲಿಗಳು ಕಾಣದ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಹುಲಿ ಇರುವುದು ಸೆರೆಯಾಗಿದೆ. ಸುಮಾರು 15 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಹುಲಿ ಇದೀಗ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಅರಣ್ಯ ಇಲಾಖೆಯ ಕ್ಯಾಮೆರಾದಲ್ಲಿ ಹುಲಿ ಸೆರೆಯಾಗಿದೆ. ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಇದುವರೆಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೇರವಾಗಿ ಹುಲಿ ಪತ್ತೆಯಾಗದಿದ್ದರೂ, ಆದಷ್ಟು ಬೇಗ ಹುಲಿಯನ್ನು ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

16/09/2026 01:20 pm

Cinque Terre

1.5 K

Cinque Terre

0