ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಪ್ರಿಯಕರ ಜೊತೆ ಟ್ರಿಪ್‌ಗೆ ಬಂದ ಯುವತಿ ಲಾಡ್ಜ್‌ನಲ್ಲಿ ಸಾವು ; ಸಾವಿನ ಸುತ್ತ ಅನುಮಾನದ ಹುತ್ತ.!

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ.

ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಮೃತ ಯುವತಿ. ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಸಕಲೇಶಪುರಕ್ಕೆ ಬಂದಿದ್ದಳು. ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ತೆರಳಿ ಸುತ್ತಾಡಿದ್ದರು.

ಬಳಿಕ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ಕೊಠಡಿಯಲ್ಲಿ ಮೂವರು ತಂಗಿದ್ದರು. ಮಂಗಳವಾರ ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಮೃತಪಟ್ಟಿದ್ದಾಳೆ.

ಕೂಡಲೇ ರಘು ಹಾಗೂ ದರ್ಶನ್, ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ. ಯುವತಿ ಮೃತಪಟ್ಟಿರುವ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By :
PublicNext

PublicNext

16/09/2026 02:46 pm

Cinque Terre

6.39 K

Cinque Terre

0

ಸಂಬಂಧಿತ ಸುದ್ದಿ