ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ವಿದ್ಯಾರ್ಥಿಗಳು ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಿ - ಬಿಆರ್‌ಪಿ ಬಸವರಾಜ ಎಂ. ಯರಗುಪ್ಪಿ ಕರೆ!

ಗದಗ: ಆಧುನಿಕ ಕಾಲಘಟ್ಟದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ಅರಿತು, ಅದನ್ನು ತಮ್ಮ ನಿತ್ಯ ಜೀವನದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಸವರಾಜ ಎಂ. ಯರಗುಪ್ಪಿ ಕರೆ ನೀಡಿದ್ದಾರೆ.

ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸಿಮಿಕೇರಿ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಲ್.ಟಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ, ಅಡರಕಟ್ಟಿ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗಾಸನ ಅಭ್ಯಾಸವು ಕೇವಲ ದೈಹಿಕ ಆರೋಗ್ಯವನ್ನು ಮಾತ್ರವಲ್ಲದೆ, ಮಾನಸಿಕ ಏಕಾಗ್ರತೆ ಹಾಗೂ ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳಲು ಅತ್ಯಂತ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉಪಸ್ಥಿತಿ:

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ ಅಡರಕಟ್ಟಿ ವಹಿಸಿದ್ದರು. ಪ್ರಧಾನ ಗುರುಮಾತೆ ಶ್ರೀಮತಿ ಎಂ.ವೈ. ನೀಲನಾಯ್ಕರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಎಸ್.ಸಿ. ಹಿರೇಮಠ ಸೇರಿದಂತೆ ಎ.ಎಂ. ಮಠದ, ಮಂಜುನಾಥ ಚಾಕಲಬ್ಬಿ, ಪಿ.ಸಿ. ಕಾಳಶೆಟ್ಟಿ, ಡಿ.ಡಿ. ಲಮಾಣಿ, ಡಿ.ಕೆ. ಕೋಟೆಗೌಡ್ರ, ಜಿ.ಎನ್. ಹೆಬ್ಬಳ್ಳಿ, ಎಲ್.ಟಿ. ಪೂಜಾರ, ಕೆ.ವೈ. ಮುದಗಲ್, ರೂಪಾ ಸಂತಿ, ವೀಣಾ ಹತ್ತಿಕಾಳ, ಕೆ.ಎಂ. ಕೊಟ್ರಮ್ಮ, ಎಸ್.ಎಂ. ಕೌಜಗೇರಿ, ಪಿ.ಬಿ. ಗುರಮಠ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮತ್ತು ಯೋಗಾಸನ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

16/09/2026 03:36 pm

Cinque Terre

3.3 K

Cinque Terre

0

ಸಂಬಂಧಿತ ಸುದ್ದಿ