ಶಿರಸಿ: ನಗರದ ಪ್ರತಿಷ್ಠಿತ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 2025-26ನೇ ಸಾಲಿನಲ್ಲಿ ಒಟ್ಟು 67.13 ಲಕ್ಷ ರೂಪಾಯಿ ನಿವ್ವಳ ಲಾಭಿಯಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀಧರ್ ಮುಗೇರ ತಿಳಿಸಿದ್ದಾರೆ. ನಗರದ ಸಿಪಿ ಬಜಾರ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಅವರು ಈ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯು ಆಡಿಟ್‌ನಲ್ಲಿ 'ಅ' ವರ್ಗದ ಶ್ರೇಣಿಯನ್ನು ಪಡೆದುಕೊಂಡಿದ್ದು, ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದೆ. ಪ್ರಸ್ತುತ ಸಂಘದಲ್ಲಿ ಶೇ. 9ರ ಬಡ್ಡಿ ದರದಲ್ಲಿ ಬಂಗಾರದ ಅಡಮಾನ ಸಾಲ, ಶೇ. 11ರ ದರದಲ್ಲಿ ವಾಹನ ಸಾಲ ಹಾಗೂ ಹೊಸದಾಗಿ ಶೇ. 12ರ ಬಡ್ಡಿ ದರದಲ್ಲಿ ಅಡಮಾನ ಸಾಲ ನೀಡಲಾಗುತ್ತಿದೆ ಎಂದು ಹೇಳಿದರು.
Kshetra Samachara
16/09/2026 04:27 pm
LOADING...