ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಗ್ರಾಮೀಣ ಜನರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ; ಬಾಣಾವರದಲ್ಲಿ 'ಡಿಜಿ ಪೇ' ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ

ಹಾಸನ: ಗ್ರಾಮೀಣ ಜನರಿಗೆ ಸುಲಭವಾಗಿ ಹಾಗೂ ಸಮೀಪದಲ್ಲೇ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಬಾಣಾವರ ಬಿ ಹಣ ಸಂಗ್ರಹಣ ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಂಗವಾಗಿ APES ಹಾಗೂ MATM ಸೇವೆಗಳ ಮೂಲಕ ನಗದು ಹಣವನ್ನು ವಿತ್‌ಡ್ರಾ ಮಾಡುವ ಪ್ರಾಯೋಗಿಕ ಪ್ರಾತ್ಯಕ್ಷಿಕೆ ನಡೆಸಲಾಯಿತು. ಡಿಜಿ ಪೇ ಸೇವೆಯ ಸಂಪೂರ್ಣ ಪ್ರಕ್ರಿಯೆಯನ್ನು ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಪ್ರದರ್ಶಿಸುವ ಮೂಲಕ ಸೇವೆಯ ಅನುಷ್ಠಾನಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಸುಬ್ರಮಣ್ಯ, ಹಣಕಾಸು ಪ್ರಬಂಧಕ ಅರುಣ್, ವಲಯದ ಮೇಲ್ವಿಚಾರಕಿ ಪ್ರೇಮ ಸೇರಿದಂತೆ ಸೇವಾ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

Edited By :
Kshetra Samachara

Kshetra Samachara

16/09/2026 07:22 pm

Cinque Terre

2.82 K

Cinque Terre

0

ಸಂಬಂಧಿತ ಸುದ್ದಿ