ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿವಿಆರ್ ಐನಾಕ್ಸ್ ಹಾಗೂ ಪೋರಂ ಮಾಲ್ ಸಿಬ್ಬಂದಿಗೆ ಒಟ್ಟು 1.25 ಲಕ್ಷ ರೂ.ದಂಡ - ಕೆ. ಎನ್. ರಮೇಶ್

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಬಿಟಿಎಂ ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್ ವ್ಯಾಪ್ತಿಯ ಹೊಸೂರು ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ‘ಪಿವಿಆರ್ ಸಿನಿಮಾಸ್’ (PVR INOX Limited) ವಾಣಿಜ್ಯ ಸಂಸ್ಥೆಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಪಾಲಿಕೆ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿತು.

ಪರಿಶೀಲನೆಯ ವೇಳೆ ಸಂಸ್ಥೆಯು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಗಾಳಿಗೆ ತೂರಿ ಹಸಿ-ಒಣ ಕಸವನ್ನು ಮೂಲದಲ್ಲೇ ವಿಂಗಡಿಸದೆ ಇರುವುದು ಹಾಗೂ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು (SWM Rules) ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಪಿವಿಆರ್ ಸಂಸ್ಥೆಗೆ ಒಟ್ಟು 75,000 ರೂ. ದಂಡ ವಿಧಿಸಿ ವಸೂಲಿ ಮಾಡಲಾಯಿತು.

ದಂಡ ವಿಧಿಸಿದ ವಿವರ:

* ಕಸವನ್ನು ಮೂಲದಲ್ಲೇ ಸಮರ್ಪಕವಾಗಿ ವಿಂಗಡಿಸದೆ ಮಿಶ್ರಣ ಮಾಡಿದ್ದಕ್ಕಾಗಿ (Non-Segregated Waste) 50,000 ರೂ. ದಂಡ.

* ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆಗೆ (Plastic Food Beverage / SUP) 25,000 ರೂ. ದಂಡ.

ಮತ್ತೊಂದೆಡೆ ಉತ್ತರಹಳ್ಳಿ ಕನಕಪುರ ಮುಖ್ಯ ರಸ್ತೆಯ ಜಯನಗರ ಹೌಸಿಂಗ್ ಸೊಸೈಟಿ ಬಡಾವಣೆಯ ಶಾಪ್ ವೆಲ್ ಸೂಪರ್ ಮಾರ್ಕೆಟ್ ಹತ್ತಿರ ಒಳಚರಂಡಿ ಸಂಸ್ಕರಣ ತ್ಯಾಜ್ಯ (STP) ಸುರಿದಿರುವುದು ಕಂಡುಬಂದಿರುತ್ತದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಹಾಗೂ ಈ STP ತ್ಯಾಜ್ಯವು ಪೋರಂ ಮಾಲ್ ಗೆ ಸೇರಿದ್ದಾಗಿದೆ ಎಂದು ಮಾಲ್ ನ ಸಿಬ್ಬಂದಿ ಒಪ್ಪಿದ ಮೇರೆಗೆ 50,839 ರೂ. ಗಳ ದಂಡ ವಿಧಿಸಿ ವಸೂಲಿ ಮಾಡಲಾಗಿದೆ.

ದಂಡ ವಸೂಲಿ ಮಾಡಿದ ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ನಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳನ್ನು ಬಳಸಬಾರದು ಎಂದು ಚಿತ್ರಮಂದಿರದ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಎಲ್ಲಾ ವಾಣಿಜ್ಯ ಮಳಿಗೆಗಳು, ಮಾಲ್‌ಗಳು, ಚಿತ್ರಮಂದಿರಗಳು ಹಾಗೂ ಹೋಟೆಲ್‌ಗಳು ಕಡ್ಡಾಯವಾಗಿ ಘನತ್ಯಾಜ್ಯ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿ ನಗರದ ಸ್ವಚ್ಛತೆ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುವ ವಾಣಿಜ್ಯ ಸಂಸ್ಥೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಇಂತಹ ಕಾರ್ಯಾಚರಣೆಗಳನ್ನು ಮುಂದಿನದಿನಗಳಲ್ಲಿಯೂ ನಿರಂತರವಾಗಿ ನಡೆಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಈ ಕಾರ್ಯಾಚರಣೆಯಲ್ಲಿ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳು ಹಾಗೂ ಘನತ್ಯಾಜ್ಯ ವಿಭಾಗದ ಅಧಿಕಾರಿಗಳ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

16/09/2026 07:27 pm

Cinque Terre

60

Cinque Terre

0