ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಅರೆಕೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಹೆಜ್ಜೆ ಗುರುತು ಪತ್ತೆ ಮಾಡಿ ಸ್ಥಳದಲ್ಲೇ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ!

ಸಕಲೇಶಪುರ: ತಾಲೂಕಿನ ಅರೆಕೆರೆ ಗ್ರಾಮದಲ್ಲಿ ಚಿರತೆ ಸಂಚಾರದ ಮಾಹಿತಿ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು, ಬ್ಯಾಕರವಳ್ಳಿ ಶಾಖಾ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ RRT ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮಸ್ಥರಾದ ಕುಮಾರ್ ಅವರೊಂದಿಗೆ ಸಂತೋಷ್ ಅವರ ತೋಟ ಹಾಗೂ ರೀ ಟ್ರೀಟ್ ಹೋಮ್‌ಸ್ಟೇ ಸಮೀಪ ಪರಿಶೀಲನೆ ನಡೆಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಚಿರತೆ ಸಂಚಾರವಿರುವುದು ದೃಢಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ವೇಳೆ ರೀ ಟ್ರೀಟ್ ಹೋಮ್‌ಸ್ಟೇನಲ್ಲಿ ಕನ್ನಡ ಚಲನಚಿತ್ರ *‘ಶಬ್ದ’*ದ ಚಿತ್ರೀಕರಣದಲ್ಲಿ ತೊಡಗಿದ್ದ ನಟ ಹಾಗೂ ನಿರ್ದೇಶಕ ಎಸ್. ಮಹೇಂದರ್ ಮತ್ತು ಚಿತ್ರತಂಡಕ್ಕೆ ಚಿರತೆ ಸಂಚಾರದ ಬಗ್ಗೆ ಮಾಹಿತಿ ನೀಡಿ, ಎಚ್ಚರಿಕೆಯಿಂದ ಇರುವಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ಸೂಚನೆ ನೀಡಿದರು.

ಚಿರತೆ ಕಾಣಿಸಿಕೊಂಡ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಎಸ್. ಮಹೇಂದರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿರತೆ ಸಂಚಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿ

Edited By :
Kshetra Samachara

Kshetra Samachara

17/09/2026 11:18 am

Cinque Terre

1.32 K

Cinque Terre

0