ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸವಣೂರು: ಕ್ರೀಡಾಂಗಣ ಹೆಸರಿಗೆ ಮಾತ್ರ, ಜನನಿಬಿಡ ನಗರದ ಮಧ್ಯದಲ್ಲೇ ರಾಜಾರೋಷವಾಗಿ ಪಟಾಕಿ ಮಾರಾಟ!

ಸವಣೂರು: ಸವಣೂರು ನಗರದ ಜನನಿಬಿಡ ಪ್ರದೇಶದಲ್ಲೇ ಪಟಾಕಿ ಮಾರಾಟ ಹಾಗೂ ಸಂಗ್ರಹಣೆ ನಡೆಯುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ದೈನಂದಿನ ಚಟುವಟಿಕೆಗಳಿಂದ ಜನಸಂದಣಿ ಹೆಚ್ಚಿರುವ ಈ ಪ್ರದೇಶದಲ್ಲಿ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಯಾವುದೇ ದೊಡ್ಡ ಅನಾಹುತಕ್ಕೆ ಆಹ್ವಾನ ನೀಡಿದಂತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ತಾಲೂಕು ಕ್ರೀಡಾಂಗಣವು ಹೆಸರಿಗೆ ಮಾತ್ರ ಎಂಬಂತಾಗಿದ್ದು, ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಜನನಿಬಿಡ ಪ್ರದೇಶಗಳಲ್ಲಿ ಪಟಾಕಿ ವ್ಯಾಪಾರ ನಡೆಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಯಾವುದೇ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಪಟಾಕಿ ಮಾರಾಟಕ್ಕೆ ಅಗತ್ಯ ಅನುಮತಿ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ಪವನಕುಮಾರ ಎಸ್. ಎಲ್., ಸವಣೂರು.

Edited By :
PublicNext

PublicNext

17/09/2026 11:51 am

Cinque Terre

11.03 K

Cinque Terre

0

ಸಂಬಂಧಿತ ಸುದ್ದಿ