ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಮೂರು ವರ್ಷಗಳಿಂದ ಸಂಬಳ ನೀಡದೆ ಕಿರುಕುಳದ ಆರೋಪ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ.!

ಗೌರಿಬಿದನೂರು : ಮೂರು ವರ್ಷಗಳಿಂದ ಸಂಬಳ ನೀಡದೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ತಮಿಳುನಾಡು ಮೂಲದ ದಂಪತಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸಿಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಅಶೋಕ್ ಹಾಗೂ ಸತ್ಯ ದಂಪತಿಗಳು ಕಳೆದ ನಾಲ್ಕು ವರ್ಷಗಳಿಂದ ಸಿಂಗಾನಹಳ್ಳಿ ಗ್ರಾಮದ ಮೌನಾಲಿಸಾ ಫಾರಂನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ರಜನಿಕಾಂತ್ ಎಂಬ ವ್ಯಕ್ತಿ ಕಿರುಕುಳ ನೀಡುತ್ತಿದ್ದು, ಕಳೆದ ಮೂರು ವರ್ಷಗಳಿಂದ ಸಂಬಳವನ್ನೂ ನೀಡಿಲ್ಲ ಎಂದು ದಂಪತಿಗಳು ಆರೋಪಿಸಿದ್ದಾರೆ.

ಇದರಿಂದ ಮನನೊಂದು ದಂಪತಿಗಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By :
PublicNext

PublicNext

17/09/2026 12:39 pm

Cinque Terre

8.24 K

Cinque Terre

0

ಸಂಬಂಧಿತ ಸುದ್ದಿ