ಸಿದ್ದಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 76ನೇ ಜನ್ಮದಿನಾಚರಣೆಯ ಅಂಗವಾಗಿ ಸಿದ್ದಾಪುರ ಬಿಜೆಪಿ ಮಂಡಲದ ವತಿಯಿಂದ ಸಿದ್ದಾಪುರ ಪಟ್ಟಣದ ಶ್ರೀ ಗಂಗಾಮಾತಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ದೊರೆಯಲಿ ಹಾಗೂ ಅವರ ನೇತೃತ್ವದಲ್ಲಿ ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ತೋಟಪ್ಪ ನಾಯ್ಕ ಹೊಸೂರು, ನಿಕಟಪೂರ್ವ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ, ಸುರೇಶ ನಾಯ್ಕ ಬಾಲಿಕೊಪ್ಪ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ನಂದನ್ ಬೋರ್ಕರ್, ಯುವ ಮೋರ್ಚಾ ಅಧ್ಯಕ್ಷ ಅಣ್ಣಪ್ಪ ನಾಯ್ಕ ಕಡಕೇರಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಭಟ್ಟ, ವಿಜೇತ ಗೌಡರ್, ಪ್ರಮುಖರಾದ ಚಂದ್ರು ಕೊಡಿಯಾ, ಶ್ರೀನಿವಾಸ್ ಹೊಸೂರು, ಯಶ್ವಂತ್ ನಾಯ್ಕ ಬಾಲಿಕೊಪ್ಪ ಉಪಸ್ಥಿತರಿದ್ದರು.
PublicNext
17/09/2026 12:47 pm
LOADING...