ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: ರಸ್ತೆ ಸುರಕ್ಷತೆ ಸಾರಿದ ವಿನೂತನ ‘ಹೆಲ್ಮೆಟ್ ಗಣಪತಿ’ ಮೂರ್ತಿ ವಿಸರ್ಜನೆ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ವಿಶೇಷ ‘ಹೆಲ್ಮೆಟ್ ಗಣಪತಿ’ ಮೂರ್ತಿಯನ್ನು ವಿಧಿವಿಧಾನಗಳೊಂದಿಗೆ ವಿಸರ್ಜನೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸವಾರರು ಜೀವ ಕಳೆದುಕೊಳ್ಳುತ್ತಿರುವ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಈ ವಿನೂತನ ಹೆಲ್ಮೆಟ್ ಗಣಪತಿಯನ್ನು ಪ್ರತಿಷ್ಠಾಪಿಸಿದ್ದರು.

ಲಕ್ಕಿ ವಿನಾಯಕ ಗೆಳೆಯರ ಬಳಗದ ವತಿಯಿಂದ ತಾಯಿ ಗೌರಮ್ಮ ಮಗ ಗಣಪನಿಗೆ ಹೆಲ್ಮೆಟ್ ನೀಡುವ ಮಾದರಿಯಲ್ಲಿ ಈ ಗಣೇಶನನ್ನು ಕೂರಿಸಿ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗಿತ್ತು. ವಿಸರ್ಜನಾ ಮೆರವಣಿಗೆಯ ಮುನ್ನ ಯುವಕರು "ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ" ಎಂದು ಘೋಷಣೆಗಳನ್ನು ಕೂಗುವ ಮೂಲಕ ಸವಾರರಲ್ಲಿ ಜಾಗೃತಿ ಮೂಡಿಸಿ ಬಳಿಕ ಗಣೇಶನ ಮೂರ್ತಿಯನ್ನು ಭಕ್ತಿಭಾವದಿಂದ ವಿಸರ್ಜನೆ ಮಾಡಿದರು.

Edited By :
PublicNext

PublicNext

17/09/2026 03:26 pm

Cinque Terre

8.18 K

Cinque Terre

0

ಸಂಬಂಧಿತ ಸುದ್ದಿ