ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ಸೆ.20ರಂದು ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ

ಶಿರಸಿ : ಲಯನ್ಸ್ ಕ್ಲಬ್ ಶಿರಸಿ ಮತ್ತು ಸಂಗಮ ಸೇವಾ ಸಂಸ್ಥೆ ಅಂಕೋಲಾ ಇವರ ಸಹಯೋಗದಲ್ಲಿ ನುರಿತ ತಜ್ಞ ವೈದ್ಯರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಸೆ.20ರಂದು ಬೆಳಗ್ಗೆ 8.30ರಿಂದ ಮಧ್ಯಾಹ್ನ 2ರವರೆಗೆ ನಗರದ ಲಯನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ ಮಲ್ಮನೆ ತಿಳಿಸಿದ್ದಾರೆ.

ಅವರು ಗುರುವಾರ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ. ಭಾಸ್ಕರ ಸ್ವಾದಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಬಸವರಾಜ ಚಕ್ರಸಾಲಿ, ಖಜಾಂಚಿ ಶಂಕರ ಹೆಗಡೆ ಭದ್ರನ್, ಶ್ರೀಧರ ಹೆಗಡೆ ಹಲಸರಿಗೆ, ರವೀಂದ್ರ ಶೆಟ್ಟಿ ಹಾಗೂ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಗುರುರಾಜ್ ಹೊನ್ನಾವರ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/09/2026 03:53 pm

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ