ಚಾಮರಾಜನಗರ: ಸಾಮಾನ್ಯವಾಗಿ ಆಸ್ಪತ್ರೆಗೆ ರೋಗಿಗಳು ಚಿಕಿತ್ಸೆಗೆ ಬರುವುದು ಸಹಜ. ಆದರೆ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆಗೆ ಬೃಹತ್ ಗಾತ್ರದ ನಾಗರಹಾವೊಂದು ಪ್ರತ್ಯಕ್ಷಗೊಂಡು, ಕೆಲ ಕಾಲ ಸಾರ್ವಜನಿಕರು ಹಾಗೂ ರೋಗಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು.
ನಾಗರಹಾವು ಕಂಡ ತಕ್ಷಣವೇ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಅರಣ್ಯ ಇಲಾಖೆಗೆ ಮತ್ತು ವನ್ಯಜೀವಿ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಮಧು, ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿದ್ದಾರೆ. ಬಳಿಕ ಅದನ್ನು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.
Kshetra Samachara
17/09/2026 04:14 pm
LOADING...