ಮೊಳಕಾಲ್ಮುರು:- ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವಾದ ಸೆಪ್ಟೆಂಬರ್ 17 ಅನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಪದವಿ ಪಡೆದ ಯುವಕರೊಂದಿಗೆ ತರಕಾರಿ ಮಾರಾಟ ಮಾಡುವ ಮೂಲಕ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ಅನೇಕ ಯುವಕರು ಉದ್ಯೋಗಕ್ಕಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ವಿದ್ಯಾವಂತ ಯುವಕರಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು. ಯುವಕರಿಗೆ ಉದ್ಯೋಗ ನೀಡುವ ಕುರಿತು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುವ ಮೂಲಕ ನಿರುದ್ಯೋಗಿ ಯುವಕರ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ತಿಳಿಸಿದರು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ದಾದಾಪೀರ್ ಕೆ.ಆರ್. ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
Kshetra Samachara
17/09/2026 05:39 pm
LOADING...