ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಪ್ರಮುಖ ಬಸ್ ನಿಲ್ದಾಣದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿ, ಸೆಪ್ಟೆಂಬರ್ 17ನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಘೋಷಿಸಬೇಕೆಂದು ಆಗ್ರಹಿಸಿದರು.
2014ರಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ, ಉದ್ಯೋಗ ಸೃಷ್ಟಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8.23 ಲಕ್ಷ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಕಾಯಂ ಹುದ್ದೆಗಳನ್ನು ಹೊರಗುತ್ತಿಗೆಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ರೈಲ್ವೆ, ವಿಮಾನ ನಿಲ್ದಾಣಗಳ ಖಾಸಗೀಕರಣ ಮತ್ತು ‘ಅಗ್ನಿವೀರ್’ ಯೋಜನೆಯಿಂದ ಯುವಕರ ಭವಿಷ್ಯ ಹಾಳಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬೆಲೆ ಏರಿಕೆ, ನಿರುದ್ಯೋಗ ಹಾಗೂ ರೂಪಾಯಿ ಮೌಲ್ಯ ಕುಸಿತವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
PublicNext
17/09/2026 05:43 pm
LOADING...