ಅಥಣಿ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರದ ನಿರ್ದೇಶನದಂತೆ ಸೆ.19ರಂದು ಅನಂತಪುರ ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ ಸಭೆ’ ಆಯೋಜಿಸಲಾಗಿದೆ.
ಅಥಣಿ ತಾಲೂಕಿನ ಅನಂತಪುರ ಗ್ರಾಮದ ಅಂಬಾಭವಾನಿ ಮಂಗಲ ಕಾರ್ಯಾಲಯದಲ್ಲಿ ಸೆ.19ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸಭೆ ನಡೆಯಲಿದೆ.
ಹೋಬಳಿಯ ಸಾರ್ವಜನಿಕರು ತಮ್ಮ ವಿವಿಧ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸಲ್ಲಿಸಿ, ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ಸಿದ್ದರಾಯ ಭೋಸಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
17/09/2026 06:10 pm
LOADING...