ಮಡಿಕೇರಿ: ಕೊಡಗು ಯುವ ಸೇನಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮ ದಿನವನ್ನು ಕೊಡಗು ಜಿಲ್ಲೆಯಾದ್ಯಂತ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಮಡಿಕೇರಿ ಕೋಟೆ ಮಹಾಗಣಪತಿ ದೇವಾಲಯದಲ್ಲಿ ಯುವ ಸೇನಾ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು. ಇದೇ ವೇಳೆ ಸೋಮವಾರಪೇಟೆ ತಾಲೂಕು ಕೊಡಗು ಯುವ ಸೇನಾ ವತಿಯಿಂದ ನಗರದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ರು.
ವಿರಾಜಪೇಟೆಯ ಗಣಪತಿ ದೇವಾಲಯದಲ್ಲೂ ಕೊಡಗು ಯುವ ಸೇನಾ ವಿರಾಜಪೇಟೆ ತಾಲೂಕು ಸಮಿತಿ ವತಿಯಿಂದ ಪುಷ್ಪಾರ್ಚನೆ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಸೇನಾ ಮುಖಂಡ ಕುಲದೀಪ್ ಪುಣಚ, ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬಿಡುವಿಲ್ಲದೆ ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿಗಾಗಿ ಅವರ ಸೇವೆ ಮುಂದುವರಿಯಲಿ ಹಾಗೂ ಅವರಿಗೆ ದೀರ್ಘಾಯುಷ್ಯ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
PublicNext
17/09/2026 07:25 pm
LOADING...