ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಪೂಜೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ನಾಯಕರು ಪೂಜೆ ನೆರವೇರಿಸಿ ಸಂಭ್ರಮಿಸಿದರೆ, ಕಾಂಗ್ರೆಸ್ ನಾಯಕರು ನಿರುದ್ಯೋಗ ದಿನ ಆಚರಣೆ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಬಿಜೆಪಿ ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅವರ ಆಯುಷ್ಯ ಹಾಗೂ ಆರೋಗ್ಯ ವೃದ್ಧಿಯಾಗಲಿ ಎಂದು ಹಾರೈಸಿತು. ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.

ಇತ್ತ ಕಾಂಗ್ರೆಸ್ ಯುವ ಘಟಕವು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ನಿರುದ್ಯೋಗ ದಿನ ಎಂದು ಆಚರಿಸಿತು. ತಳ್ಳುವ ಗಾಡಿಯಲ್ಲಿ ತರಕಾರಿ ಮಾರುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾರ್ಷಿಕ ಸರಾಸರಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಮೋದಿ ಅವರು ಮಾತಿಗೆ ತಪ್ಪಿದ್ದಾರೆ ಎಂದು ಆರೋಪಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

Edited By : PublicNext Desk
Kshetra Samachara

Kshetra Samachara

17/09/2026 07:46 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ