ತುಮಕೂರು : ಸಾರ್ವಜನಿಕರಿಗೆ ತುರ್ತು ಆರೋಗ್ಯ ಸೇವೆ ಒದಗಿಸುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಊರ್ಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೊಸ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಅವರು ಇತ್ತೀಚೆಗೆ ಊರ್ಡಿಗೆರೆ ಮಾರ್ಗವಾಗಿ ಕೊರಟಗೆರೆಗೆ ತೆರಳುವ ಸಂದರ್ಭದಲ್ಲಿ ಸಾರ್ವಜನಿಕರು ಆಂಬುಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಅಹವಾಲು ಸಲ್ಲಿಸಿದ್ದರು. ಸ್ಥಳದಲ್ಲಿಯೇ ಉಪ ಮುಖ್ಯಮಂತ್ರಿಗಳು ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸೂಚಿಸಿದ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಅನ್ನು ಸಾರ್ವಜನಿಕ ಸೇವೆಗೆ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
18/09/2026 08:18 am
LOADING...