ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಭೀಮಸಂದ್ರ ರೈಲ್ವೆ ಕೆಳಸೇತುವೆ ಲೋಕಾರ್ಪಣೆ

ತುಮಕೂರು : ನಗರದ ಭೀಮಸಂದ್ರದಲ್ಲಿ ಗುರುವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಲೆವೆಲ್ ಕ್ರಾಸಿಂಗ್‌ನ ರೈಲ್ವೆ ಕೆಳಸೇತುವೆಯನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಚಿವ ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತದ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.

25-30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೋದಿ ನೇತೃತ್ವದ ಸರ್ಕಾರ ಸಹಕಾರ ನೀಡಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶೇಷ ಮುತುವರ್ಜಿ ವಹಿಸಿ ರಾಜ್ಯ ಹಾಗೂ ತುಮಕೂರಿನಲ್ಲಿ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಲು ನೆರವಾಗಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ತುಮಕೂರಿನ ಅಭಿವೃದ್ಧಿ ಚಿತ್ರಣ ಬದಲಾಗಲಿದೆ. ಮುಂದಿನ ಪೀಳಿಗೆಗೆ ಸೌಲಭ್ಯ ಒದಗಿಸುವ ಉದ್ದೇಶ ಹೊಂದಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ದಿಶಾ ಸಮಿತಿ ಸದಸ್ಯ ವೈ.ಹೆಚ್. ಹುಚ್ಚಯ್ಯ, ನಗರಪಾಲಿಕೆ ಮಾಜಿ ಸದಸ್ಯೆ ವೀಣಾ ಮನೋಹರಗೌಡ, ಮುಖಂಡರಾದ ಮನೋಹರಗೌಡ, ಟಿ.ಹೆಚ್. ಕೃಷ್ಣಪ್ಪ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

18/09/2026 08:27 am

Cinque Terre

60

Cinque Terre

0