ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಟಿ. ನರಸೀಪುರದಲ್ಲಿ ಇಂದು ಬೃಹತ್ ಶೋಭಾಯಾತ್ರೆ - ಪೊಲೀಸ್ ಸರ್ಪಗಾವಲು.

ಟಿ. ನರಸೀಪುರ : ಲಿಂಕ್ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶ ನೀಡುವುದಿಲ್ಲವೆಂದು ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿದ್ದ ಎಚ್ಚರಿಕೆಯನ್ನು ಸವಾಲಾಗಿ ಸ್ವೀಕರಿಸಿರುವ ಹಿಂದೂ ಜಾಗರಣ ವೇದಿಕೆಯು, ಇಂದು (ಶುಕ್ರವಾರ) ಪಟ್ಟಣದಲ್ಲಿ ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಂಡಿದೆ. ಇನ್ಸ್‌ಪೆಕ್ಟರ್ ಸವಾಲಿಗೆ ಪ್ರತಿಯಾಗಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ದಿಷ್ಟಪಡಿಸಿದ ಅದೇ ಲಿಂಕ್ ರಸ್ತೆ ಮಾರ್ಗವಾಗಿಯೇ ಸಂಜೆ 4 ಗಂಟೆಗೆ ಶೋಭಾಯಾತ್ರೆಯನ್ನು ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಮೆರವಣಿಗೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹೇರಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಅಳವಡಿಸಿ ಖಾಕಿ ಪಡೆ ಕಟ್ಟೆಚ್ಚರ ವಹಿಸಿದೆ.

Edited By :
PublicNext

PublicNext

18/09/2026 09:27 am

Cinque Terre

7.05 K

Cinque Terre

1

ಸಂಬಂಧಿತ ಸುದ್ದಿ