ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಹೆಬ್ರಿಗೆ ಇಂದು ಸಿಎಂ- ಸಚಿವರಿಂದ ಸ್ಥಳ ಪರಿಶೀಲನೆ

ಹೆಬ್ರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರು ಸಚಿವ ಸಂಪುಟ ಸಭೆ ಮುಗಿಸಿ, ಉಡುಪಿ ಜಿಲ್ಲೆಯ ಹೆಬ್ರಿಯ ಸರ್ಕಾರಿ ಪಿಯು ಕಾಲೇಜಿನ ಆವರಣದಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ರಾಜ್ಯದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

18/09/2026 11:13 am

Cinque Terre

4.12 K

Cinque Terre

0

ಸಂಬಂಧಿತ ಸುದ್ದಿ