ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಹಕಾರಿ ರಂಗದ ಸಾಧಕರು ಮಲ್ಲಿಕಾರ್ಜುನ ಹೊರಕೇರಿಗೆ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್

ಹುಬ್ಬಳ್ಳಿ: ಡಿಜಿಟಲ್ ಮಾಧ್ಯಮದಲ್ಲಿಯೇ ಮುಂಚೂಣಿಯಲ್ಲಿರುವ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಸಾಧಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡುತ್ತ ಬಂದಿದೆ. ಈ ನಿಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಕಾರ್ಯಕ್ರಮ ಯಶಸ್ವಿಗೊಳಿಸಿದೆ.

ಸಹಕಾರಿ ರಂಗದಲ್ಲಿ ಬಹುದೊಡ್ಡ ಸಾಧನೆ ಮಾಡಿರುವ ಸಾಧಕರು ಹುಬ್ಬಳ್ಳಿಯ ಮಲ್ಲಿಕಾರ್ಜುನ ಅಜ್ಜಪ್ಪ ಹೊರಕೇರಿ. ಬ್ಯಾಂಕ್, ಸ್ವ ಸಹಾಯ ಸಂಘ,‌ ಕೋ ಆಫರೇಟಿವ್ ಬ್ಯಾಂಕ್, ಎಜುಕೇಶನ್ ಸೊಸೈಟಿ ಸ್ಥಾಪನೆ‌ ಜೊತೆಗೆ ಸಾಮಾಜಿಕ ಸೇವೆಯಲ್ಲಿ ಸಾಕಷ್ಟು ಸೇವೆಯನ್ನು ಮಾಡಿರುವ ಸಾಧಕರ ಗಣನೀಯ ಸೇವೆಯನ್ನು ಗುರುತಿಸಿ, ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಪ್ರಶಸ್ತಿ ನೀಡಿ ಗೌರವಿಸಿದೆ. ಹುಬ್ಬಳ್ಳಿಯ ರಾಯಲ್ ರಿಡ್ಜ್ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಪ್ರೋ ಎಂ.ನಾಗರಾಜ, ‌ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ಛೇರ್ಮನ್ ಆ್ಯಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್, ಪಬ್ಲಿಕ್ ನೆಕ್ಸ್ಟ್ ಮುಖ್ಯಸ್ಥರಾದ ರಾಘವೇಂದ್ರ ರಾವ್, ಮಂಜುನಾಥ ರಾವ್ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಸಾಧಕರ ಸಾಧನೆಯ ಅನಾವರಣ ಕಾರ್ಯ ಮಾಡಿರುವುದು ವಿಶೇಷವಾಗಿದೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/09/2026 03:23 pm

Cinque Terre

12.89 K

Cinque Terre

1

ಸಂಬಂಧಿತ ಸುದ್ದಿ