ಚಾಮರಾಜನಗರ : ಕೊಳ್ಳೆಗಾಲ ಸಮೀಪದ ಟಗರಪುರ ಮೋಳೆ ಬಳಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಟಗರಪುರ ಮೋಳೆ ನಿವಾಸಿ ಮಾದೇವ (40) ಮೃತಪಟ್ಟ ದುರ್ದೈವಿ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡು, ಕೆಲ ಕಾಲ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಎಎಸ್‌ಪಿ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರನ್ನು ಸಮಾಧಾನಪಡಿಸಿ ಸಂಚಾರ ಸುಗಮಗೊಳಿಸಿದರು. ಈ ಕುರಿತು ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
18/09/2026 03:38 pm
LOADING...