ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಹಾವಿನಮೂಲೆಯಲ್ಲಿ ಮಳೆಗೆ ಮನೆಯ ಗೋಡೆ ಕುಸಿತ

ಚಾಮರಾಜನಗರ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿರುವ ಘಟನೆ ಹನೂರು ತಾಲೂಕಿನ ಹಾವಿನಮೂಲೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಮ್ಮ ಮತ್ತು ಮಾದಪ್ಪ ಅವರ ಮನೆಯ ಗೋಡೆ ಮಳೆಯಿಂದಾಗಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯ ಗೋಡೆ ಕುಸಿದಿರುವ ಪರಿಣಾಮ ಮನೆಯಲ್ಲಿ ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟವರು ಇತ್ತ ಗಮನಹರಿಸಿ, ಕುಟುಂಬಕ್ಕೆ ಸರ್ಕಾರದಿಂದ ಮನೆ ನಿರ್ಮಿಸಿಕೊಡಲು ಕ್ರಮವಹಿಸಬೇಕು ಎಂದು ಮನೆ ಮಾಲೀಕರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2026 04:13 pm

Cinque Terre

440

Cinque Terre

0

ಸಂಬಂಧಿತ ಸುದ್ದಿ