ಬೀದರ್ : ಬಸವಕಲ್ಯಾಣ ಉಪವಿಭಾಗೀಯ ಆಸ್ಪತ್ರೆಯ ನೂತನ ಕಟ್ಟಡದ ಭೂಮಿಪೂಜೆ ವೇಳೆ ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ್ ನೀರಗುಡೆ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರೆ ಅವರನ್ನು ಅಮಾನತುಗೊಳಿಸಲಾಗಿದೆ.
ಆರೋಗ್ಯ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಪಿಎಂ-ಅಭಿಮ್ ಯೋಜನೆಯಡಿ ನಡೆದ ಕಾರ್ಯಕ್ರಮದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಕರ್ನಾಟಕ ನಾಗರಿಕ ಸೇವಾ ನಿಯಮ 10(1)(ಡಿ) ಅಡಿ ಆರೋಗ್ಯ ಆಯುಕ್ತ ಗುರುದತ್ತ ಹೆಗಡೆ ಅವರು ಸೆ.17ರಂದು ಅಮಾನತು ಆದೇಶ ಹೊರಡಿಸಿದ್ದಾರೆ. ಇಲಾಖಾ ವಿಚಾರಣೆ ಆರಂಭಿಸಲಾಗಿದೆ.
ಅಮಾನತು ಅವಧಿಯಲ್ಲಿ ಜೀವನಾಂಶ ಭತ್ಯೆಗಾಗಿ ಡಾ. ನೀರಗುಡೆ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಡಾ. ಮೈಲಾರೆ ಅವರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
Kshetra Samachara
18/09/2026 04:23 pm
LOADING...