ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಶಿರಹಟ್ಟಿ : ಶಿರಹಟ್ಟಿಯಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ವೊಂದು ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದ ಘಟನೆ ಗುರುವಾರ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದ್ದು, ಬಸ್‌ನಲ್ಲಿದ್ದ 90 ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಶಿರಹಟ್ಟಿ–ಮಾಗಡಿ ಮಾರ್ಗದಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ದನಗಳು ರಸ್ತೆಗೆ ಬಂದಿವೆ. ಪರಿಸ್ಥಿತಿಯನ್ನು ಅರಿತ ಚಾಲಕ ತಕ್ಷಣ ಸಮಯ ಪ್ರಜ್ಞೆಯಿಂದ ಬಸ್‌ನ್ನು ನಿಯಂತ್ರಿಸಲು ಪ್ರಯತ್ನಿಸಿದ್ದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ನಂತರ ನಮ್ಮೊಂದಿಗೆ ಮಾತನಾಡಿದ ಸಾರ್ವಜನಿಕರು, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ರಸ್ತೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವರದಿ : ಗೌರೀಶ ನಾಗಶೆಟ್ಟಿ, ಪಬ್ಲಿಕ್ ನೆಕ್ಸ್ಟ್, ಶಿರಹಟ್ಟಿ

Edited By :
PublicNext

PublicNext

18/09/2026 04:30 pm

Cinque Terre

4.54 K

Cinque Terre

0

ಸಂಬಂಧಿತ ಸುದ್ದಿ