ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸವಣೂರು: ಶುದ್ಧ ನೀರು ಕೊಡಬೇಕಾದ ಯೋಜನೆಯಲ್ಲಿ ಕಳಪೆ ಕಾಮಗಾರಿ

ಸವಣೂರು: ಸವಣೂರು ತಾಲೂಕಿನ ಶಿರಬಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲ್ಲಿಪುರ ಗ್ರಾಮದಲ್ಲಿ ಜೆಜೆಎಂ (ಜಲ ಜೀವನ್ ಮಿಷನ್) ಯೋಜನೆಯಡಿ ನಡೆದಿರುವ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದೆ.

ಕಾಮಗಾರಿ ನಡೆದ ಸ್ಥಳದಲ್ಲಿ ಚರಂಡಿ ನೀರು ಸಂಗ್ರಹವಾಗಿರುವುದು ಕಂಡುಬಂದಿದ್ದು, ಚರಂಡಿ ನೀರು ಕುಡಿಯುವ ನೀರಿನ ಪೈಪ್‌ಲೈನ್‌ಗೆ ಮಿಶ್ರಣವಾಗುವ ಸಾಧ್ಯತೆ ಹೆಚ್ಚು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುವುದಾಗಿ ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಮಹತ್ವದ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ ಹಾಗೂ ಪೈಪ್‌ಲೈನ್ ಸುರಕ್ಷತೆಯನ್ನು ಪರಿಶೀಲಿಸಬೇಕು. ಲೋಪ ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ವರದಿ ಪವನ್ ಸವಣೂರು

Edited By : Somashekar
PublicNext

PublicNext

18/09/2026 06:41 pm

Cinque Terre

5.6 K

Cinque Terre

0

ಸಂಬಂಧಿತ ಸುದ್ದಿ