ವಿಜಯಪುರ: ಮನೆಯ ಮುಂದೆ ಕಟ್ಟೆಯ ಮೇಲೆ ಮಲಗಿದ್ದ ಯುವಕನ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಇಸಾಕ್ ಬಾಗವಾನ (25) ಹತ್ಯೆಯಾದ ಯುವಕ. ರಾತ್ರಿ ಮನೆಯ ಮುಂದೆ ಕಟ್ಟೆಯ ಮೇಲೆ ಮಲಗಿದ್ದ ವೇಳೆ ಅಪರಿಚಿತರು ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ದೇವರಹಿಪ್ಪರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಹಾಗೂ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಘಟನೆ ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
18/09/2026 07:31 pm
LOADING...