ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತರೀಕೆರೆ:ರಾತ್ರಿ ವೇಳೆ ಜಮೀನಿಗೆ ನುಗ್ಗಿದ ಕಾಡುಹಂದಿಗಳು; 200ಕ್ಕೂ ಹೆಚ್ಚು ಅಡಿಕೆ ಗಿಡಗಳು ಧ್ವಂಸ

ತರೀಕೆರೆ: ಕಷ್ಟಪಟ್ಟು ಬೆಳೆಸಿದ ಬೆಳೆ ಕೈಸೇರುವ ಹೊತ್ತಿಗೆ ಕಾಡುಹಂದಿಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಹಾನಿ ಉಂಟುಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

​ಗ್ರಾಮದ ರೈತ ಶಿವಣ್ಣ ಎಂಬುವರ ಜಮೀನಿಗೆ ತಡರಾತ್ರಿ ಲಗ್ಗೆಯಿಟ್ಟ ಕಾಡುಹಂದಿಗಳ ಹಿಂಡು, ಸುಮಾರು ನಾಲ್ಕು ವರ್ಷಗಳಿಂದ ಪೋಷಿಸಿಕೊಂಡು ಬಂದಿದ್ದ 200ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಬೇರು ಸಮೇತ ಬುಡಮೇಲು ಮಾಡಿ ನೆಲಸಮಗೊಳಿಸಿವೆ. ನಾಲ್ಕು ವರ್ಷಗಳ ಸತತ ಶ್ರಮ ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿರುವ ರೈತ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

​ಈ ಭಾಗದಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿಮೀರಿದ್ದು, ರೈತರು ತಮ್ಮ ಜೀವಮಾನದ ಉಳಿತಾಯವನ್ನು ಬೆಳೆ ಮೇಲೆ ಹೂಡಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ನಷ್ಟಕ್ಕೊಳಗಾದ ರೈತನಿಗೆ ಶೀಘ್ರವೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಕಾಡುಹಂದಿಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸ್ಥಳೀಯ ರೈತರು ತೀವ್ರ ಆಕ್ರೋಶದೊಂದಿಗೆ ಆಗ್ರಹಿಸಿದ್ದಾರೆ.

Edited By :
PublicNext

PublicNext

18/09/2026 08:05 pm

Cinque Terre

5.8 K

Cinque Terre

0

ಸಂಬಂಧಿತ ಸುದ್ದಿ