ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಸೇರಿದಂತೆ ತುಳುವರ ಸಂಭ್ರಮ ಸಡಗರ ಜೋರಾಗಿದೆ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ರು.
PublicNext
18/09/2026 08:42 pm
LOADING...