ಶಿವಮೊಗ್ಗ: ತಾಲೂಕಿನ ಯಾರಗನಾಳ ಗ್ರಾಮದ ಮನೆಯ ಬಚ್ಚಲು ಕೋಣೆಯಲ್ಲಿ ಪ್ಲಾಸ್ಟಿಕ್ ಕವರ್‌ಗಳಲ್ಲಿ ಜಿಂಕೆ ಮಾಂಸ ದಾಸ್ತಾನು ಮಾಡಿದ್ದ ಇಬ್ಬರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಯಾರಗನಾಳು ಗ್ರಾಮದ ಎಂ.ಸೇತು 46) ಹಾಗೂ ಅವರ ಪುತ್ರ ಧನುಷ್ ಅಲಿಯಾಸ್ ದರ್ಶನ್ (18) ಬಂಧಿತರು. ಪ್ರಕರಣದಲ್ಲಿ ಮತ್ತೊಬ್ಬ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಶುಕ್ರವಾರ ಉಂಬಳೇಬೈಲು ವಲಯದ ರಾತ್ರಿ ಗಸ್ತು ಸಿಬ್ಬಂದಿ ಹಾಗೂ ಲಕ್ಕಿನಕೊಪ್ಪ ಶಾಖೆಯ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಆರ್ ಎಫ್ ಓ ಪ್ರದೀಪ್ ನೇತೃತ್ವದಲ್ಲಿ ಯಾರಗನಾಳು ಗ್ರಾಮದಲ್ಲಿರುವ ಸೇತು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಮನೆಯ ಬಚ್ಚಲು ಕೋಣೆಯಲ್ಲಿ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್‌ಗಳಲ್ಲಿ ಜಿಂಕೆ ಮಾಂಸವನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಜಿಂಕೆ ಮಾಂಸ ಸಂಗ್ರಹಿಸಿರುವ ಕುರಿತು ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ.
Kshetra Samachara
18/09/2026 09:23 pm
LOADING...