ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ : ಯುವಕರಿಂದ ಸ್ವಚ್ಛವಾಯ್ತು ಊರಿನ ಬಾವಿ

ಅಥಣಿ : ಯುವಕರು ಮನಸ್ಸು ಮಾಡಿದರೆ ಯಾವುದೇ ಕೆಲಸವನ್ನು ಸಾಧಿಸಬಹುದು ಎಂಬುದಕ್ಕೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಯುವಕರು ಮಾದರಿಯಾಗಿದ್ದಾರೆ.

ಗ್ರಾಮದಲ್ಲಿ ಪ್ರತಿ ವರ್ಷ ಯುವಕರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಸಾರ್ವಜನಿಕ ಸೇದುವ ಬಾವಿಯನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳುತ್ತಿದ್ದಾರೆ. ಈ ಬಾರಿಯೂ ಬಾವಿಯಲ್ಲಿ ಸಂಗ್ರಹವಾಗಿದ್ದ ಕಸ, ಮಣ್ಣು ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವ ಮೂಲಕ ಗಮನ ಸೆಳೆದಿದ್ದಾರೆ.

ಗ್ರಾಮದ ಸಾರ್ವಜನಿಕ ಬಳಕೆಯ ಬಾವಿಯನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಕಾಳಜಿ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಮೆರೆದಿರುವ ಯುವಕರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವಕರ ಈ ಸೇವಾ ಕಾರ್ಯಕ್ಕೆ ಗ್ರಾಮದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Edited By :
PublicNext

PublicNext

19/09/2026 09:05 am

Cinque Terre

6.26 K

Cinque Terre

0

ಸಂಬಂಧಿತ ಸುದ್ದಿ