ಮಂಗಳೂರಿನ ಸಚಿವ ಸಂಪುಟ ಸಭೆ ಬಳಿಕ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಡಿ.ಕೆ. ಶಿವಕುಮಾರ್
ಉಡುಪಿ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಸಂಜೆ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ಆಗಮಿಸಿದರು.
ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಆಗಮಿಸಿದರು. ಬಳಿಕ ಶಾಸಕರು, ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಸಿಎಂ ಅವರನ್ನು ಸ್ವಾಗತಿಸಿದರು.
ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಕಸ್ತೂರಿರಂಗನ್ ವರದಿಯಿಂದ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಸ್ಥಳೀಯರ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ.
PublicNext
19/09/2026 10:46 am
LOADING...