ಮೈಸೂರು: ಸ್ವಚ್ಛತೆಗೆ ಮಾದರಿಯಾಗಬೇಕಿದ್ದ ಪಿಡಿಒ ತನ್ನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಂಜನಗೂಡು ತಾಲೂಕಿನ ಹುರಾ ಗ್ರಾಮ ಪಂಚಾಯಿತಿ ಪಿಡಿಒ ರಾಘವೇಂದ್ರ ಇಂತಹ ಎಡವಟ್ಟು ಮಾಡಿದವರು. ತಾನು ಕರ್ತವ್ಯ ನಿರ್ವಹಿಸುವ ಕಚೇರಿ ಗೋಡೆ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ಸೆರೆಹಿಡಿದಿದ್ದಾರೆ.
ಚ್ಛತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜವಾಬ್ದಾರಿ ಈ ಅಧಿಕಾರಿಗೆ ಇದೆ. ತನ್ನ ಜವಾಬ್ದಾರಿಯನ್ನು ಮರೆತು ಹೀಗೆ ವರ್ತಿಸಿರುವುದು ಹೇಯಕರ. ಇಂತಹ ಬೇಜವಾಬ್ದಾರಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವರೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.
PublicNext
19/09/2026 11:20 am
LOADING...