ಭಾಗ್ಯನಗರ: ಬಾಗೇಪಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರ ಸಂಘದ ವತಿಯಿಂದ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಯಿತು.
ಗಣೇಶ ಚತುರ್ಥಿಯ ಅಂಗವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಐದು ದಿನಗಳ ಕಾಲ ವಿಶೇಷ ಪೂಜೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಗಣೇಶೋತ್ಸವದ ಅಂಗವಾಗಿ ಮಾರುಕಟ್ಟೆ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವರ್ತಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು.
ಐದು ದಿನಗಳ ಪೂಜಾ ಕಾರ್ಯಕ್ರಮಗಳ ಬಳಿಕ ಗಣೇಶ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ ವಾಹನದಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು. ಡೊಳ್ಳು, ವಾದ್ಯಮೇಳ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ನಡೆದ ಮೆರವಣಿಗೆ ಗಮನ ಸೆಳೆಯಿತು. ಭಕ್ತರು 'ಗಣಪತಿ ಬಪ್ಪಾ ಮೋರಿಯಾ...' ಎಂಬ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ವರ್ತಕರ ಸಂಘದ ಪದಾಧಿಕಾರಿಗಳು, ವರ್ತಕರು, ಮಾರುಕಟ್ಟೆ ಸಿಬ್ಬಂದಿ, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಬಳಿಕ ಸಂಪ್ರದಾಯಬದ್ಧವಾಗಿ ಗಣೇಶ ಮೂರ್ತಿಯ ವಿಸರ್ಜನೆ ನೆರವೇರಿಸುವ ಮೂಲಕ ಐದು ದಿನಗಳ ಗಣೇಶೋತ್ಸವಕ್ಕೆ ತೆರೆ ಎಳೆಯಲಾಯಿತು. ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಶಾಂತಿ-ಸುವ್ಯವಸ್ಥೆಗೆ ಆದ್ಯತೆ ನೀಡಲಾಗಿತ್ತು.
-ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
19/09/2026 11:49 am
LOADING...