ಚಿಂತಾಮಣಿ: ರೈತರ ಹಿತರಕ್ಷಣೆಗೆ ಜೆಡಿಎಸ್ ಪಕ್ಷ ಸದಾ ಬದ್ಧವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಿ ರೈತರು ಹಾಗೂ ಬಡವರ ನೆರವಿಗೆ ಬರಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ ಆಗ್ರಹಿಸಿದರು.
ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಕ್ರಾಸ್ ಸಮೀಪದ ವಿ.ಪಿ. ಪ್ಯಾಲೇಸ್‌ನಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾಮಟ್ಟದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ರೈತರ ಹಿತದೃಷ್ಟಿಯಿಂದ ಕೈಗೊಂಡ ಹಲವು ನಿರ್ಧಾರಗಳನ್ನು ಸ್ಮರಿಸಿದ ಅವರು, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಂತೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.
ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಲ್ಲಿ ಸಂಘಟನೆ ಚುರುಕುಗೊಳಿಸಬೇಕು. ಪಕ್ಷದ ತತ್ವ-ಸಿದ್ಧಾಂತಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲು ಉತ್ಪಾದಕರು ಹಾಗೂ ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ ಅವರು, ಹಾಲಿನ ಪ್ರೋತ್ಸಾಹಧನ ಸೇರಿದಂತೆ ರೈತರ ಸಮಸ್ಯೆಗಳ ಪರವಾಗಿ ಜೆಡಿಎಸ್ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದರು. ನವೆಂಬರ್ 22, 2024ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಾಲು ಉತ್ಪಾದಕರ ನಿಯೋಗ ಹಾಗೂ ಕಾರ್ಯಕರ್ತರೊಂದಿಗೆ ನಡೆಯಲಿರುವ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
19/09/2026 11:55 am
LOADING...