ಚಾಮರಾಜನಗರ : ಸಾರ್ವಜನಿಕರ ಸೇವೆ ಸರ್ಕಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ಗುಂಡ್ಲುಪೇಟೆ ಪಟ್ಟಣದ ಶಿಕ್ಷಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಗುಂಡ್ಲುಪೇಟೆ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಕುಂದುಕೊರತೆಗಳನ್ನು ಆಲಿಸಿ ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಆಯಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ ಎಂದರು.
ಸಭೆಯಲ್ಲಿ ಜನರು ಸಲ್ಲಿಸಿದ ಅರ್ಜಿಗಳನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ವರ್ಗಾಯಿಸಲಾಗುವುದು. ಸಭೆಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
Kshetra Samachara
19/09/2026 12:14 pm
LOADING...