ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಮಸ್ಯೆಗಳದ್ದೇ ಸದ್ದು

ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣದ ಶಿಕ್ಷಕರ ಭವನದಲ್ಲಿ ಶನಿವಾರ ನಡೆದ ಗುಂಡ್ಲುಪೇಟೆ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಮಳೆಯೇ ಸುರಿಯಿತು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಕುಡಿಯುವ ನೀರು, ಕೆರೆಗಳಿಗೆ ನೀರು ತುಂಬಿಸುವುದು, ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವುದು, ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಸೌಲಭ್ಯ ಕಲ್ಪಿಸುವುದು ಹಾಗೂ ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವುದು ಸೇರಿದಂತೆ ಹಲವು ಸಮಸ್ಯೆಗಳು ಸಚಿವ ಸಿ. ಪುಟ್ಟರಂಗಶೆಟ್ಟಿ ಅವರ ಎದುರು ಬಲವಾಗಿ ಕೇಳಿ ಬಂದವು.

ಸಭೆಯಲ್ಲಿ ಕೇಳಿ ಬಂದ ಸಮಸ್ಯೆಗಳಿಗೆ ಸ್ಪಂದಿಸಿದ ಸಚಿವ ಸಿ. ಪುಟ್ಟರಂಗಶೆಟ್ಟಿ, ಸಂಬಂಧಪಟ್ಟ ಇಲಾಖೆಯವರು ಸಾರ್ವಜನಿಕರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

Edited By : PublicNext Desk
Kshetra Samachara

Kshetra Samachara

19/09/2026 12:31 pm

Cinque Terre

580

Cinque Terre

0

ಸಂಬಂಧಿತ ಸುದ್ದಿ