ಮಧ್ಯಪ್ರದೇಶ: ಆಗರ್ ಮಾಲ್ವಾ ಜಿಲ್ಲೆಯ ನಲ್ಖೇಡಾದಲ್ಲಿ ಕಾಲುವೆಗೆ ಕಾರು ಉರುಳಿಬಿದ್ದು 8 ಮಂದಿ ಮೃತಪಟ್ಟಿದ್ದಾರೆ.
ನಲ್ಖೇಡಾದ ಪ್ರಸಿದ್ಧ ತಾಯಿ ಬಗಲಾಮುಖಿ ದೇವಸ್ಥಾನಕ್ಕೆ ದರ್ಶನಕ್ಕಾಗಿ ಭಕ್ತರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾತ್ರಿ ಸುರಿದ ಭಾರಿ ಮಳೆಯಿಂದ ದೇವಸ್ಥಾನದ ಸಮೀಪದ ಕಾಲುವೆಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾಗಿತ್ತು. ಕಾಲುವೆ ಬಳಿ ಸಾಗುತ್ತಿದ್ದ ಕಾರು ನೀರಿನ ರಭಸಕ್ಕೆ ಸಿಲುಕಿ ಕಾಲುವೆಗೆ ಉರುಳಿದೆ. ಬಳಿಕ ಕಾರು ನೀರಿನಲ್ಲಿ ಕೊಚ್ಚಿಹೋಗಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯ ಆಡಳಿತ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಆದರೆ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ.
ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಸೇರಿದ್ದಾರೆ. ಮೃತರೆಲ್ಲರೂ ದೇವರ ದರ್ಶನಕ್ಕಾಗಿ ನಲ್ಖೇಡಾಗೆ ಬಂದಿದ್ದ ಭಕ್ತರು ಎಂದು ತಿಳಿದುಬಂದಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗುರುತು ಪತ್ತೆಗಾಗಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡುವ ಪ್ರಕ್ರಿಯೆ ಮುಂದುವರಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
PublicNext
19/09/2026 02:49 pm
LOADING...