ನವಲಗುಂದ : ಕಾರ್ಮಿಕರ ಕಾರ್ಡ್‌ಗಳನ್ನು ಮೂರು ವರ್ಷಕ್ಕೊಮ್ಮೆ ನವೀಕರಿಸುವಂತೆ ಆದೇಶಿಸಬೇಕೆಂದು ಆಗ್ರಹಿಸಿ ತಾಲೂಕು ಕಟ್ಟಡ ಕಾರ್ಮಿಕರು ಮಲ್ಲಪ್ಪ ಹೆಬಸೂರ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಸುಧೀರ ಸಾಹುಕಾರ ಅವರಿಗೆ ಮನವಿ ಸಲ್ಲಿಸಿದರು.
ವರ್ಷಕ್ಕೊಮ್ಮೆ ಕಾರ್ಮಿಕರ ಕಾರ್ಡ್ ನವೀಕರಣ ಮಾಡುವುದರಿಂದ ಕಾರ್ಮಿಕರು ಹಾಗೂ ಹಿರಿಯ ಕಾರ್ಮಿಕರಿಗೆ ಬಹಳಷ್ಟು ಸಮಸ್ಯೆ ಉಂಟಾಗಿದೆ. ಕಾರ್ಮಿಕರಿಗೆ ಈಗ ನೀಡುತ್ತಿರುವ ಕಿಟ್‌ಗಳ ಬದಲಾಗಿ, ಅವರ ಮಕ್ಕಳಿಗೆ ವಿದ್ಯಾರ್ಥಿವೇತನದ ಅವಶ್ಯಕತೆ ಇದೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವು ರದ್ದಾಗಿದ್ದು, 2022-23ರಿಂದ ಇಲ್ಲಿಯವರೆಗೆ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಬಡ ಕಾರ್ಮಿಕರಿಗೆ ವಸತಿ ಯೋಜನೆ ಜಾರಿಗೆ ತಂದು ವಸತಿ ಸೌಲಭ್ಯ ಒದಗಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ವೇಳೆ ಬಸಲಿಂಗಯ್ಯ ಪೂಜಾರ, ಬಸಣ್ಣ ಹುಳಕ್ಕಣ್ಣವರ, ಮಂಜುನಾಥ ಸುಣಗಾರ, ಬಾಬಾಜಾನ ಹಳ್ಳಿಕೇರಿ ಸೇರಿದಂತೆ ಇತರರು ಇದ್ದರು.
Kshetra Samachara
19/09/2026 03:21 pm
LOADING...