ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜೃಂಭಣೆಯ ಸಂಭ್ರಮಾಚರಣೆ ನಡೆಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ಸಹ ಒಟ್ಟಿಗೆ ರಾರಾಜಿಸಿದೆ.
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಉತ್ಸಾಹದಿಂದ ಘೋಷಣೆಗಳನ್ನು ಕೂಗಿದರು.
ಇದೇ ವೇಳೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆಯೂ ತುಳು ಭಾಷಾ ಮಾನ್ಯತೆಯ ಘೋಷಣೆಗೆ ವ್ಯಾಪಕ ಸಂಭ್ರಮಾಚರಣೆಗಳು ಜರುಗುತ್ತಿವೆ.
Kshetra Samachara
19/09/2026 03:54 pm
LOADING...