ಹುಬ್ಬಳ್ಳಿ : ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರ ಮಠ ಕೆ.ಎಲ್.ಇ ಕಾಲೇಜು ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಗಬ್ಬೂರಿನಿಂದ ಬಿಡನಾಳ ಸಂಪರ್ಕ ಕಲ್ಪಿಸುವ ರಸ್ತೆ ಸುತ್ತ ಪೂರ್ಣ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಹೌದು ! ಇಂದು ಹುಬ್ಬಳ್ಳಿ ನಗರದಲ್ಲಿ ಕೆ.ಎಲ್.ಇ ನೂತನ 1300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಉದ್ಘಾಟನೆ ಅಂಗವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದಲ್ಲದೇ ರಸ್ತೆ ಸಂಪೂರ್ಣ ಸ್ವಚ್ಛತೆ ಜೊತೆಗೆ ಧೂಳು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಕೆ.ಎಲ್.ಇ ಆಸ್ಪತ್ರೆ ಉದ್ಘಾಟನೆಗೆ ಜನಸಾಗರ ಹರಿದು ಬಂದಿದೆ.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 04:56 pm
LOADING...