ಚಾಮರಾಜನಗರ : ಯಳಂದೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯಳಂದೂರಿನ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಚಾಮರಾಜನಗರ ಜಿಲ್ಲಾ ಸೈಬರ್ ಕ್ರೈம் ವಿಭಾಗದ ಡಿವೈಎಸ್ಪಿ ಎಂ.ಎಸ್. ಪವನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಣಕಾಸು ವಂಚನೆ, ಜಾಬ್ ವಂಚನೆ, ಎಪಿಕೆ ಫೈಲ್, ಇನ್ವೆಸ್ಟ್‌ಮೆಂಟ್ ವಂಚನೆ, ಡಿಜಿಟಲ್ ಅರೆಸ್ಟ್ ಹಾಗೂ ಗಿಫ್ಟ್ ಕಾರ್ಡ್ ವಂಚನೆಗಳ ಬಗ್ಗೆ ವಿವರಿಸಿದರು. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು. ಅನುಮಾನ ಬಂದರೆ ತಕ್ಷಣ 1930ಕ್ಕೆ ಕರೆ ಮಾಡಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಲಾವಣ್ಯ, ಮಹಿಳೆಯರ ಋತುಚಕ್ರದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ನಿರ್ದೇಶಕ ದಿನೇಶ್, ಯೋಜನೆಯಿಂದ ದೊರೆಯುವ ಸೌಲಭ್ಯಗಳು, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಜ್ಞಾನವಿಕಾಸ ಕೇಂದ್ರಗಳ ಮಹತ್ವದ ಕುರಿತು ಮಾತನಾಡಿದರು.
PublicNext
19/09/2026 05:05 pm
LOADING...