ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ : ಮಿಯಾರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಕಾರ್ಕಳ ತಾಲೂಕಿನ ಮಿಯಾರು ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸೆಪ್ಟೆಂಬರ್ 19ರಂದು ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

“ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಸಭೆಯ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಹಿಸಿದ್ದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಯಿತು.

ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಹಾಗೂ ಯೋಜನೆಗಳು ಜನರಿಗೆ ನೇರವಾಗಿ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವಿನ ಸಮನ್ವಯಕ್ಕೆ ಸಭೆಯಲ್ಲಿ ಮಹತ್ವ ನೀಡಲಾಯಿತು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಲು ಈ ಪ್ರಜಾಸೇವಾ ಆಂದೋಲನ ವೇದಿಕೆಯಾಗಿತ್ತು.

ವರದಿ : ಮಂಜು ಶೆಟ್ಟಿ ಸಾಣೂರು, ಪಬ್ಲಿಕ್ ನೆಕ್ಸ್ಟ್, ಕಾರ್ಕಳ

Edited By :
PublicNext

PublicNext

19/09/2026 05:14 pm

Cinque Terre

4.98 K

Cinque Terre

0

ಸಂಬಂಧಿತ ಸುದ್ದಿ