ಗೋಕಾಕ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಗೋಕಾಕ ಬಿಜೆಪಿ ಪಕ್ಷದ ನಗರ ಮತ್ತು ಗ್ರಾಮೀಣ ಘಟಕದ ನೂರಾರು ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಭಾರಿ ಪ್ರತಿಭಟನೆ ಮಾಡಿದರು.
ಶಾಸಕರ ಗೃಹ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿ, ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮಂಜು ಪೂಜೇರಿ ಮಾತನಾಡಿ, "ಪಕ್ಷಾತೀತವಾಗಿ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೋಕಾಕ ತಾಲೂಕನ್ನು ಬರಪೀಡಿತ ಘೋಷಣೆಯಿಂದ ಕೈಬಿಟ್ಟಿರುವುದು ಯಾವ ಉದ್ದೇಶಕ್ಕಾಗಿ?" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾದ ಉದ್ದಪ್ಪ ಬಣಕಾರಿ ಅವರು, "ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನಮ್ಮ ಗೋಕಾಕ ಕಾಣುತ್ತಿಲ್ಲವೇ? ನಮ್ಮಲ್ಲಿಯೂ ಮಳೆ ಇಲ್ಲದೆ, ಬೆಳೆಗಳು ಬಾರದೆ, ಜಾನುವಾರುಗಳಿಗೆ ನೀರಿಲ್ಲ. ಅದಕ್ಕಾಗಿ ಗೋಕಾಕ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಣೆ ಮಾಡಬೇಕು" ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಭೀಮಗೌಡ ಪೊಲೀಸ್‌ಗೌಡ ಪಾಟೀಲ, ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನಾವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
PublicNext
19/09/2026 05:22 pm
LOADING...