ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಗಬ್ಬೂರಿನಲ್ಲಿ ನೂತನವಾಗಿ ನಿರ್ಮಿಸಿದ ಕೆಎಲ್‌ಇ ಆಸ್ಪತ್ರೆ ಹಾಗೂ ಕಾಲೇಜಿನ ಲೋಕಾರ್ಪಣೆಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಹುಬ್ಬಳ್ಳಿಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ವರು ವೈದ್ಯರಿಂದ ಅಮಿತ್ ಶಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮಿತ್ ಶಾ ತಂಗಿರುವ ಹೋಟೆಲ್‌ನಲ್ಲಿಯೇ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 05:31 pm
LOADING...