ಮೊಳಕಾಲ್ಮೂರು : ನಾಗಸಮುದ್ರ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಗ್ರಾಮೀಣ ಪ್ರದೇಶದ ಜನರು ತಮ್ಮ ಸಮಸ್ಯೆಗಳಿಗೆ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ಅಧಿಕಾರಿಗಳೇ ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಾರ್ವಜನಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
19/09/2026 05:34 pm
LOADING...