ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೀನುಗಾರರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಿರುವುದಕ್ಕೆ ಸಿಎಂ ಸಿಡಿಮಿಡಿ

ಮಂಗಳೂರು: ಸಿಎಂ ಭೇಟಿ ಹಿನ್ನೆಲೆಯಲ್ಲಿ ಬಂದರಿನಲ್ಲಿ ವ್ಯಾಪಾರ ಮಾಡಲು ಮೀನುಗಾರರಿಗೆ ಅವಕಾಶ ನೀಡದಿರುವುದನ್ನು ಗಮನಿಸಿದ ಸಿಎಂ ಸಿಡಿಮಿಡಿಗೊಂಡರು. "ಯಾವುದೇ ಕಾರಣಕ್ಕೂ ವ್ಯಾಪಾರ ನಿಲ್ಲಬಾರದು. ಇದರಿಂದ ಮೀನುಗಾರರು ಹಾಗೂ ವ್ಯಾಪಾರಿಗಳ ಜೀವನಕ್ಕೆ ತೊಂದರೆಯಾಗಲಿದೆ. ತಕ್ಷಣ ವ್ಯಾಪಾರ ಪ್ರಾರಂಭಿಸಿ" ಎಂದು ಸೂಚಿಸಿದರು.

"ದೇಶದ ವಿವಿಧ ಮೂಲೆಗಳಿಂದ ಇಲ್ಲಿಗೆ ಬಂದು ವ್ಯಾಪಾರ-ವಹಿವಾಟು ನಡೆಸುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಮೂಲಸೌಕರ್ಯಗಳು ದೊರೆಯಬೇಕು, ವಾಹನ ಸಂಚಾರ ಸುಗಮವಾಗಿರಬೇಕು. ಇಲ್ಲಿ ರಸ್ತೆಯನ್ನು ನಿರ್ಬಂಧಿಸಿರುವುದು, ಅಕ್ರಮವಾಗಿ ಕಾಂಪೌಂಡ್ ಹಾಕಿರುವುದೆಲ್ಲವೂ ನನ್ನ ಗಮನಕ್ಕೆ ಬಂದಿದೆ. ಕಾನೂನು ಉಲ್ಲಂಘಿಸಿರುವವರು ಎಷ್ಟೇ ದೊಡ್ಡವರಾಗಿದ್ದರೂ, ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು. ಖಾಸಗಿ ಆಸ್ತಿಯಾಗಿದ್ದರೆ ದಾಖಲೆಗಳನ್ನು ನೋಡಿ ಸರ್ಕಾರದ ವಶಕ್ಕೆ ಪಡೆಯುತ್ತೇವೆ. ಅಭಿವೃದ್ಧಿಯನ್ನು ಮಾಡುತ್ತೇವೆ" ಎಂದು ಖಡಕ್ ಎಚ್ಚರಿಕೆ ನೀಡಿದರು.

Edited By :
PublicNext

PublicNext

19/09/2026 05:48 pm

Cinque Terre

8.89 K

Cinque Terre

0

ಸಂಬಂಧಿತ ಸುದ್ದಿ